ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟುಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.

ಮಾರ್ಕ 10:21-22

ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ; ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.

ಮಾರ್ಕ 8:34-35

ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.

ಮತ್ತಾಯ 10:38

ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.

ಗಲಾತ್ಯರಿಗೆ 2:20

ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಲೂಕ. 9:23-25

“ಓ ಪಿತನೇ, ನಿಮಗೆ ಇಷ್ಟವಾದರೆ ಈ ಕಷ್ಟದ ಕೊಡವನ್ನು ನನ್ನಿಂದ ತೊಲಗಿಸಿರಿ. ಆದರೂ ನನ್ನ ಚಿತ್ತವಲ್ಲ, ನಿಮ್ಮ ಚಿತ್ತವೇ ನೆರವೇರಲಿ,” ಎಂದರು. ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.

ಲೂಕ. 22:42-43

ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.

ಗಲಾತ್ಯರಿಗೆ 5:24

ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು. ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು? ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.

ಮತ್ತಾಯ 16:24-27

ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.

ರೋಮನರಿಗೆ 8:18

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.

ಯಕೋಬನು 1:12

ಉಚಿತ ಬೈಬಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ

ಉಚಿತ ಬೈಬಲ್ ಪಡೆಯಿರಿ.

ನಿಮ್ಮಿ ಫೋನ್, ಟ್ಯಾಬ್ಲೆಟ್, ಮತ್ತು ಕಂಪ್ಯೂಟರ್ಗಾಗಿ


ಉಚಿತ ಬೈಬಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ

ಬೈಬಲ್ ಅನ್ನು ಓದಿರಿ: 40ಕ್ಕೂ ಹೆಚ್ಚಿನ ಭಾಷೆಗಳ ನಿಮ್ಮ ಆಯ್ಕೆಗಾಗಿ ಬೈಬಲ್ ಅಪ್ಲಿಕೇಷನ್ನಿನ ಇಂಟರ್‌ಫೇಸ್ ಅನ್ನು ನಿಗದಿಗೊಳಿಸಿ. 100ಕ್ಕೂ ಹೆಚ್ಚಿನ ಭಾಷೆಗಳಲ್ಲಿ ನೂರಾರು ಬೈಬಲ್ ಆವೃತ್ತಿಗಳಿಂದ ಸುಲಭವಾಗಿ ಆಯ್ಕೆ ಮಾಡಿಕೊಳ್ಳಿ. ಆಫ್‌ಲೈನ್ ಬೈಬಲ್‌ಗಳು: ನೆಟ್‌ವರ್ಕ್ ಪ್ರವೇಶವಿಲ್ಲದೆಯೂ ಓದಬಹುದು. ಆಡಿಯೋ ಬೈಬಲ್‌ಗಳನ್ನು ಆಲಿಸಿ ಮತ್ತು ಹೊಚ್ಚಹೊಸ ಸ್ಕಿಪ್, ಪ್ಲೇಬ್ಯಾಕ್ ವೇಗ, ಮತ್ತು ಟೈಮರ್ ನಿಯಂತ್ರಣಗಳನ್ನು ಸವಿಯಿರಿ. ಬೈಬಲ್ ಅಪ್ಲಿಕೇಷನ್‌ನಲ್ಲಿ ಪರಸ್ಪರ ಸ್ನೇಹಗಳ ಸಹಾಯದಿಂದ ನಿಮ್ಮ ನಿಕಟ ಸಂಬಂಧಿಗಳ ಮಧ್ಯೆ ಬೈಬಲ್ ಅನ್ನು ಇಡಿ. ಟಿವಿ ಮಿನಿಸರಣಿಗಳಿಂದ ‘ದಿ ಬೈಬಲ್’, ಜಗತ್ತನ್ನು ಬದಲಿಸಿದ ‘ಜೀಸಸ್’ ಚಲನಚಿತ್ರ, ಹಾಗೂ ‘ದಿ ಲುಮೊ ಪ್ರಾಜೆಕ್ಟ್’ ನಿಂದ ತುಣುಕುಗಳನ್ನು ವೀಕ್ಷಿಸಿ.’

ಉಚಿತ ಬೈಬಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ

ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ

ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಯೊವಾನ್ನ 8:12

ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ಯೆಶಾಯ 9:2

ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಕೀರ್ತನೆಗಳು 27:1

“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


2 ಕೊರಿಂಥಿಯರಿಗೆ 4:6

ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ. ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ರೋಮನರಿಗೆ 8:10-11

ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಎಫೆಸಿಯರಿಗೆ 5:8

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ. ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ – ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


1 ಯೊವಾನ್ನನು 1:7-9

“ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಮತ್ತಾಯ 5:14-16

ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.


ಯೊವಾನ್ನ 1:5

ಕ್ರಿಸ್ಮಸ್ ಬೈಬಲ್ ವಾಕ್ಯಗಳು

ಕ್ರಿಸ್ಮಸ್ ಬೈಬಲ್ ವಾಕ್ಯಗಳು

ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.

ಮೀಕ 5:2

ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.

ಯೆಶಾಯ 7:14

ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.

ಮತ್ತಾಯ 1:20-21

ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.

ಯೊವಾನ್ನ 3:16

ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ – ಇವು ಆತನ ನಾಮಾಂಕಿತ.

ಯೆಶಾಯ 9:6

ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.

ಯೊವಾನ್ನ 1:14

ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.

ಗಲಾತ್ಯರಿಗೆ 4:4-5-4-5

ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.

ಲೂಕ. 2:10-11

ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು. “ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.

ಲೂಕ. 2:13-14

ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು. ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು. ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು. ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.

ಮತ್ತಾಯ 2:9-12

ಈಗ ನಿಮ್ಮ ಮಕ್ಕಳು ಕನ್ನಡದಲ್ಲಿ ಬೈಬಲ್ ಆ್ಯಪ್ ಅನ್ನು ಅನುಭವಿಸಬಹುದು!

ಮಕ್ಕಳಿಗಾಗಿ ಬೈಬಲ್ ಆ್ಯಪ್

ಇಂದು, ನಮ್ಮ ಪಾಲುದಾರ OneHope ರೊಂದಿಗೆ, ಕನ್ನಡ ಭಾಷೆಯಲ್ಲಿ ಮಕ್ಕಳಿಗಾಗಿ ಬೈಬಲ್ ಆ್ಯಪ್ ನ ಪ್ರಾರಂಭವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಈಗ, ಹಿಂದೆಂದಿಗಿಂತಲೂ ಹೆಚ್ಚಿನ ಮಕ್ಕಳಿಗೆ ತಮ್ಮದೇ ಆದ ಬೈಬಲ್ ಅನುಭವವನ್ನು ಆನಂದಿಸಲು ಅವಕಾಶವಿದೆ.

ಆ್ಯಪ್ ಸೆಟ್ಟಿಂಗ್‌ಗಳಲ್ಲಿ ಭಾಷೆಗಳನ್ನು ಬದಲಾಯಿಸುವುದು ಸುಲಭ:

  1. ನೀವು ಪ್ರಸ್ತುತ ಬಿಡುಗಡೆಯಾದ ನಿಮ್ಮ ಆ್ಯಪ್ ಅಪ್ ಡೇಟ್ ಮಾಡಲಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ.
  2. ಆಪ್ ತೆರೆಯಿರಿ ಮತ್ತು ಗೇರ್ ಐಕಾನ್ ಟ್ಯಾಪ್ ಮಾಡಿ (Gear icon) ತೆರೆಯಲು ಸೆಟ್ಟಿಂಗ್ಗಳು.
  3. ಭಾಷೆಯ ಮೇಲೆ ಕ್ಲಿಕ್ ಮಾಡಿ ತದನಂತರ ನಿಮಗೆ ಬೇಕಾದ ಭಾಷೆಯನ್ನು ಆರಿಸಿ.

ಆಡಿಯೋ ಈಗ ಆ ಭಾಷೆಯಲ್ಲಿ ಪ್ಲೇ ಆಗುತ್ತದೆ, ಮತ್ತು ಅದೇ ಭಾಷೆಯಲ್ಲಿ ವಾಕ್ಯಗಳೂ ಕಾಣಿಸುತ್ತವೆ!

ಈ ಶ್ರೇಷ್ಟ ಸುದ್ದಿಯನ್ನು ಆಚರಿಸಲು ದಯವಿಟ್ಟು ನಮಗೆ ಸಹಾಯ ಮಾಡಿ!

FacebookFacebook ನಲ್ಲಿ ಹಂಚಿಕೊಳ್ಳಿ

TwitterTwitter ನಲ್ಲಿ ಹಂಚಿಕೊಳ್ಳಿ

EmailEmail ಮೂಲಕ ಹಂಚಿಕೊಳ್ಳಿ


ಮಕ್ಕಳಿಗಾಗಿ ಬೈಬಲ್ ಆ್ಯಪ್ ಯೇಸು

ಮಕ್ಕಳಿಗಾಗಿ ಬೈಬಲ್ ಆ್ಯಪ್ ಬಗ್ಗೆ

OneHope, ಮಕ್ಕಳಿಗಾಗಿ ಬೈಬಲ್ ಆ್ಯಪ್ ರ ಸಹಭಾಗಿತ್ವದಲ್ಲಿ YouVersionರವರಿಂದ, ಬೈಬಲ್ ಅಪ್ಲಿಕೇಶನ್ತಯಾರಕರಿಂದ ಅಭಿವೃದ್ಧಿಪಡಿಸಲಾಗಿದೆ. ಮಕ್ಕಳಿಗೆ ಸಂತೋಷದಿಂದ ತುಂಬಿದ ಬೈಬಲ್ ಅನುಭವವನ್ನು ನೀಡಲು ವಿನ್ಯಾಸಗೊಂಡಿರುವ ಮಕ್ಕಳಿಗಾಗಿ ಬೈಬಲ್ ಆಪ್ ಈಗಾಗಲೇ 34 ಮಿಲಿಯನ್ ಆಪಲ್, ಆಂಡ್ರಾಯ್ಡ್ ಮತ್ತು ಕಿಂಡಲ್ ಸಾಧನಗಳಲ್ಲಿ ಇನ್ ಸ್ಟಾಲ್ ಆಗಿದೆ, ಮತ್ತು ಇದು ಯಾವಾಗಲೂ ಸಂಪೂರ್ಣವಾಗಿ ಉಚಿತವಾಗಿದೆ. ಪ್ರಪಂಚದಾದ್ಯಂತದ ಮಕ್ಕಳು ಈಗ 50 ಭಾಷೆಗಳಲ್ಲಿ ಮಕ್ಕಳಿಗಾಗಿ ಬೈಬಲ್ ಆಪ್ ಅನ್ನು ಆನಂದಿಸುತ್ತಿದ್ದಾರೆ – ಈಗ ಕನ್ನಡ ಭಾಷೆಯು ಸೇರ್ಪಡೆಯಾಗಿದೆ!

App Store Google Play Amazon