ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟುಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.

ಮಾರ್ಕ 10:21-22

ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ; ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.

ಮಾರ್ಕ 8:34-35

ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.

ಮತ್ತಾಯ 10:38

ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.

ಗಲಾತ್ಯರಿಗೆ 2:20

ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಲೂಕ. 9:23-25

“ಓ ಪಿತನೇ, ನಿಮಗೆ ಇಷ್ಟವಾದರೆ ಈ ಕಷ್ಟದ ಕೊಡವನ್ನು ನನ್ನಿಂದ ತೊಲಗಿಸಿರಿ. ಆದರೂ ನನ್ನ ಚಿತ್ತವಲ್ಲ, ನಿಮ್ಮ ಚಿತ್ತವೇ ನೆರವೇರಲಿ,” ಎಂದರು. ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.

ಲೂಕ. 22:42-43

ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.

ಗಲಾತ್ಯರಿಗೆ 5:24

ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು. ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು? ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.

ಮತ್ತಾಯ 16:24-27

ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.

ರೋಮನರಿಗೆ 8:18

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.

ಯಕೋಬನು 1:12