ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟುಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.

ಮಾರ್ಕ 10:21-22

ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ; ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.

ಮಾರ್ಕ 8:34-35

ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.

ಮತ್ತಾಯ 10:38

ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.

ಗಲಾತ್ಯರಿಗೆ 2:20

ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಲೂಕ. 9:23-25

“ಓ ಪಿತನೇ, ನಿಮಗೆ ಇಷ್ಟವಾದರೆ ಈ ಕಷ್ಟದ ಕೊಡವನ್ನು ನನ್ನಿಂದ ತೊಲಗಿಸಿರಿ. ಆದರೂ ನನ್ನ ಚಿತ್ತವಲ್ಲ, ನಿಮ್ಮ ಚಿತ್ತವೇ ನೆರವೇರಲಿ,” ಎಂದರು. ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.

ಲೂಕ. 22:42-43

ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.

ಗಲಾತ್ಯರಿಗೆ 5:24

ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು. ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು? ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.

ಮತ್ತಾಯ 16:24-27

ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.

ರೋಮನರಿಗೆ 8:18

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.

ಯಕೋಬನು 1:12

ಉಚಿತ ಬೈಬಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ

ಉಚಿತ ಬೈಬಲ್ ಪಡೆಯಿರಿ.

ನಿಮ್ಮಿ ಫೋನ್, ಟ್ಯಾಬ್ಲೆಟ್, ಮತ್ತು ಕಂಪ್ಯೂಟರ್ಗಾಗಿ


ಉಚಿತ ಬೈಬಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ

ಬೈಬಲ್ ಅನ್ನು ಓದಿರಿ: 40ಕ್ಕೂ ಹೆಚ್ಚಿನ ಭಾಷೆಗಳ ನಿಮ್ಮ ಆಯ್ಕೆಗಾಗಿ ಬೈಬಲ್ ಅಪ್ಲಿಕೇಷನ್ನಿನ ಇಂಟರ್‌ಫೇಸ್ ಅನ್ನು ನಿಗದಿಗೊಳಿಸಿ. 100ಕ್ಕೂ ಹೆಚ್ಚಿನ ಭಾಷೆಗಳಲ್ಲಿ ನೂರಾರು ಬೈಬಲ್ ಆವೃತ್ತಿಗಳಿಂದ ಸುಲಭವಾಗಿ ಆಯ್ಕೆ ಮಾಡಿಕೊಳ್ಳಿ. ಆಫ್‌ಲೈನ್ ಬೈಬಲ್‌ಗಳು: ನೆಟ್‌ವರ್ಕ್ ಪ್ರವೇಶವಿಲ್ಲದೆಯೂ ಓದಬಹುದು. ಆಡಿಯೋ ಬೈಬಲ್‌ಗಳನ್ನು ಆಲಿಸಿ ಮತ್ತು ಹೊಚ್ಚಹೊಸ ಸ್ಕಿಪ್, ಪ್ಲೇಬ್ಯಾಕ್ ವೇಗ, ಮತ್ತು ಟೈಮರ್ ನಿಯಂತ್ರಣಗಳನ್ನು ಸವಿಯಿರಿ. ಬೈಬಲ್ ಅಪ್ಲಿಕೇಷನ್‌ನಲ್ಲಿ ಪರಸ್ಪರ ಸ್ನೇಹಗಳ ಸಹಾಯದಿಂದ ನಿಮ್ಮ ನಿಕಟ ಸಂಬಂಧಿಗಳ ಮಧ್ಯೆ ಬೈಬಲ್ ಅನ್ನು ಇಡಿ. ಟಿವಿ ಮಿನಿಸರಣಿಗಳಿಂದ ‘ದಿ ಬೈಬಲ್’, ಜಗತ್ತನ್ನು ಬದಲಿಸಿದ ‘ಜೀಸಸ್’ ಚಲನಚಿತ್ರ, ಹಾಗೂ ‘ದಿ ಲುಮೊ ಪ್ರಾಜೆಕ್ಟ್’ ನಿಂದ ತುಣುಕುಗಳನ್ನು ವೀಕ್ಷಿಸಿ.’

ಉಚಿತ ಬೈಬಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ

ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ

ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಯೊವಾನ್ನ 8:12

ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ಯೆಶಾಯ 9:2

ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಕೀರ್ತನೆಗಳು 27:1

“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


2 ಕೊರಿಂಥಿಯರಿಗೆ 4:6

ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ. ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ರೋಮನರಿಗೆ 8:10-11

ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಎಫೆಸಿಯರಿಗೆ 5:8

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ. ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ – ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


1 ಯೊವಾನ್ನನು 1:7-9

“ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಮತ್ತಾಯ 5:14-16

ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.


ಯೊವಾನ್ನ 1:5